Saturday, August 8, 2026

BDA Apartments

Home Front Page ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ- ಬಿ.ಕೆ ಹರಿಪ್ರಸಾದ್ ಕಿಡಿ

ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ- ಬಿ.ಕೆ ಹರಿಪ್ರಸಾದ್ ಕಿಡಿ

ಮಂಗಳೂರು,ಆಗಸ್ಟ್,20,2024 (www.justkannada.in): ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್  ವಿರುದ್ದ ಕಿಡಿಕಾರಿರುವ ಎಂಎಲ್ ಸಿ ಬಿ.ಕೆ ಹರಿಪ್ರಸಾದ್, ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಬಿ.ಕೆ ಹರಿಪ್ರಸಾದ್,  ಹಿಂದೆ ಬಿಜೆಪಿಯವರು ಅಪರೇಷನ್ ಕಮಲದಿಂದ ಸರ್ಕಾರ ಕೆಡುವುತಿದ್ದರು. ಈಗ ವಾಮಮಾರ್ಗದಿಂದ ಸರ್ಕಾರ ಅಸ್ಥಿರಕ್ಕೆ ಪ್ರಯತ್ನಮಾಡುತ್ತಿದ್ದಾರೆ.  ಸದ್ಯ ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದರು

ರಾಜ್ಯಪಾಲರು ರಾಜ ಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನದ ಚೌಕಟ್ಟಿನಲ್ಲಿರುವ ರಾಜ್ಯಪಾಲ ಹುದ್ದೆಯಲ್ಲಿರುವವರು, ತಮ್ಮ ಚೌಕಟ್ಟನ್ನು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗುವುದಿಲ್ಲ ಎಂದರು.

Key words: Governor, working, BJP president, BK Hariprasad