ಸರ್ಕಾರದ ಭರವಸೆ ಒಪ್ಪಲ್ಲ: ವೇತನ ಹೆಚ್ಚಳದ ಬಗ್ಗೆ ಆದೇಶ ಪ್ರತಿ ಸಿಕ್ಕ ಬಳಿಕ ಮುಂದಿನ ತೀರ್ಮಾನ-ಸಿಎಸ್ ಷಡಕ್ಷರಿ.

ಬೆಂಗಳೂರು,ಮಾರ್ಚ್,1,2023(www.justkannada.in):  7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಶೇ.17 ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು. ಆದರೆ ಈ ಬಗ್ಗೆ ಅಧಿಕೃತ ಆದೇಶ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ತಿಳಿಸಿದ್ದಾರೆ.

ಈ ಸಿಎಂ ಬೊಮ್ಮಾಯಿ ಭರವಸೆ ಕುರಿತು ಮಾತನಾಡಿದ ಸಿ.ಎಸ್ ಷಡಕ್ಷರಿ, ಸರ್ಕಾರದ ಭರವಸೆಯನ್ನು ನಾನು ಒಪ್ಪುವುದಿಲ್ಲ. ಅಧಿಕೃತ ಆದೇಶದ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.

ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ ನೋಡೋಣ. ಸರ್ಕಾರದ ಆದೇಶ ಪ್ರತಿ ಸಿಕ್ಕಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ.  ಈಗ ಅಧಿಕಾರಿಗಳು ಸಭೆಗೆ ಆಹ್ವಾನ ನೀಡಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ  ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

Key words: Govt’s-promise –not- accepted-CS Shadakshari -order copy – salary- increase.