ಗ್ರಾ.ಪಂ ಚುನಾವಣೆ: ನೂರಕ್ಕೆ ನೂರರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲೋದು ನಿಶ್ಚಿತ- ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಡಿಸೆಂಬರ್,28,2020(www.justkannada.in):  ಹಲವು ವಿದ್ಯಾವಂತರು ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿದ್ದಾರೆ. 100ಕ್ಕೆ ನೂರರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿ ಗಳು ಗೆಲ್ಲೋದು ನಿಶ್ಚಿತ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇದರಲ್ಲಿ ಕಾಂಗ್ರೆಸ್ ನ ಯಾವುದೇ ನಾಯಕರು ಆಸಕ್ತಿ ವಹಿಸಿರಲಿಲ್ಲ. ಮುಂದೆ ಗ್ರಾಮ ಪಂಚಾಯತಿಗೆ ಆಯ್ಕೆಯಾಗುವ ಸದಸ್ಯರಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡ್ತೀವಿ. ಜನವರಿ 1ರಿಂದ ಶಾಲೆ ಆರಂಭದ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ.  ರೂಪಾಂತರ ಕೊರೋನಾದಿಂದ ಯಾವುದೇ ಸಮಸ್ಯೆ ಆಗಿಲ್ಲ. ಇದುವರೆಗೂ ರಾಜ್ಯದಲ್ಲಿ ಯಾವುದೇ ಸಮಸ್ಯೆ ಆಗಿಲ್ಲ ಎಂದರು.gp-election-bjp-support-candidates-win-cm-bs-yeddyurappa

Key words: GP election- BJP-support-candidates- win- cm bs yeddyurappa