ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ರಿಗೆ ಜಿ.ಪಿ.ರಾಜರತ್ನಂ ಪ್ರಶಸ್ತಿ.

ಮೈಸೂರು,ಜೂನ್,30,2021(www.justkannada.in):  ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರು ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಭಾಜನರಾಗಿದ್ದಾರೆ.jk

ಇತ್ತೀಚೆಗೆ ಪುಸ್ತಕ ಪ್ರೇಮಿ ಸೈಯದ್  ಇಸಾಕ್  ಅವರ ಸ್ವಂತ ಗ್ರಂಥಾಲಯಕ್ಕೆ ಬೆಂಕಿ ಬಿದ್ದು ಸುಟ್ಟು ಹಾಳಾಗಿತ್ತು. ಸದ್ಯ ಇದೀಗ ಕನ್ನಡ ಪುಸ್ತಕ ಪ್ರಾಧಿಕಾರ ಕೊಡಮಾಡುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಇಸಾಕ್ ಅವರನ್ನ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಹಂಚೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಸಾಕ್ ರಿಗೆ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ. ಈ ಪ್ರಶಸ್ತಿಯು 1 ಲಕ್ಷ ರೂ. ನಗದು ಒಳಗೊಂಡಿದೆ. ಮೊದಲ ಬಾರಿಗೆ ಅಲ್ಪಸಂಖ್ಯಾತರೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ವಿಶೇಷ.

Key words: GP Rajaratnam Award –  Mysore-Kannada -book lover -Syed Isak