ಪದವಿ ತರಗತಿಗಳನ್ನು ಆಫ್‌ಲೈನ್‌ನಲ್ಲಿ ನವೆಂಬರ್‌ನಿಂದ ಆರಂಭಿಸಲು ತಯಾರಿ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಮೈಸೂರು,ಅಕ್ಟೋಬರ್,19,2020(www.justkannda.in) : ಸರ್ಕಾರ ಆಫ್‌ಲೈನ್‌ನಲ್ಲಿ ನವೆಂಬರ್‌ನಿಂದ ಪದವಿ ತರಗತಿ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಈ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಂಬಂಧಪಟ್ಟವರ ಜತೆಗೆ ಚರ್ಚಿಸಿ ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.jk-logo-justkannada-logo

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ಸಂಕಷ್ಟ ಕಾಲದಲ್ಲಿ ತರಗತಿ ನಡೆಯುವ ಕೋಣೆಗಳನ್ನು ನಿರಂತರವಾಗಿ ಸ್ಯಾನಿಟೈಸ್‌ ಹಾಗೂ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್‌ ಮಾಡತ್ತಿರಬೇಕು. ವಿದ್ಯಾರ್ಥಿಗಳು ಮತ್ತು ಬೋಧಕರು, ಸಿಬ್ಬಂದಿಯ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸುಲಭವಲ್ಲ. ಮುಖ್ಯವಾಗಿ ವೈರಸ್‌ ನಮ್ಮ ನಡುವೆಯೇ ಜೀವಂತವಾಗಿ ಓಡಾಡಿಕೊಂಡಿದೆ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸುತ್ತೇವೆ. ಶಾಲಾ-ಕಾಲೇಜುಗಳನ್ನು ಆರಂಭಿಸುವುದಕ್ಕೂ ಸಿನಿಮಾ ಟಾಕೀಸ್‌ಗಳನ್ನು ತೆರೆಯುವುದಕ್ಕೂ ಪರಸ್ಪರ ಹೋಲಿಸುವುದು ಸರಿಯಲ್ಲ. ಈ ವಿಷಯದಲ್ಲಿ ಆತುರ ಸಲ್ಲ ಎಂದು ತಿಳಿಸಿದರು.

ಯುಜಿಸಿಯ ಮಾರ್ಗಸೂಚಿ ಅನ್ವಯ ಕಾಲೇಜು ಆರಂಭಕ್ಕೆ ಸಿದ್ಧತೆGraduate-classes-start-offline-online-November- DCM-Dr. C.N. Ashwaththa Narayana

ಈಗಾಗಲೇ ಯುಜಿಸಿಯಿಂದ ಕಾಲೇಜು ಆರಂಭಕ್ಕೆ ಸೂಕ್ತ ಮಾಹಿತಿ, ಮಾರ್ಗಸೂಚಿ ಬಂದಿದೆ. ಅದರನ್ವಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಶೀಘ್ರವೇ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕಾಲೇಜು ಆರಂಭದ ದಿನವನ್ನು ಪ್ರಕಟಿಸಲಾಗುವುದು. ಈಗಾಗಲೇ ಎಲ್ಲ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿಗಳು ಉತ್ತಮವಾಗಿ ನಡೆಯುತ್ತಿವೆ. ಡಿಜಿಟಲ್‌ ಕಲಿಕೆ ಮತ್ತು ಬೋಧನೆ ನಿರೀಕ್ಷೆಗೂ ಮೀರಿ ಉತ್ತಮವಾಗಿ ನಡೆಯುತ್ತಿದೆ. ವಿದ್ಯಾರ್ಥಿಗಳು ಇದೇ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ತಯಾರಿ ಮಾಡಿಕೊಳ್ಳಬೇಕು ಎಂದರು.

2021ನೇ ಸಾಲಿನಿಂದ ನೂತನ ಶಿಕ್ಷಣ ನೀತಿ ಹಂತಹಂತವಾಗಿ ಜಾರಿ

ಈ ವರ್ಷ ಎಲ್ಲ ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಂಡು 2021ನೇ ಸಾಲಿನಿಂದ ನೂತನ ಶಿಕ್ಷಣ ನೀತಿಯನ್ನು ಹಂತಹಂತವಾಗಿ ಜಾರಿ ಮಾಡಲಾಗುವುದು. ಕೇಂದ್ರ ಸರ್ಕಾರ ರೂಪಿಸಿರುವ ನೂತನ ಶಿಕ್ಷಣ ನೀತಿ ಜಾರಿಗೆ ಸರಕಾರ ಎಲ್ಲ ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ನೀತಿಯ ಅನುಷ್ಟಾನಕ್ಕಾಗಿ ರೂಪಿಸಲಾಗಿರುವ ಕಾರ್ಯಪಡೆ ಮೊದಲ ವರದಿಯನ್ನು ನೀಡಿದೆ. ಘಟಿಕೋತ್ಸವ ಕಾರ್ಯಕ್ರದಲ್ಲಿ ದಿಲ್ಲಿಯಿಂದಲೇ ಆಲ್‌ಲೈನ್‌ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಶಿಕ್ಷಣ ನೀತಿಯ ಮಹತ್ವದ ಬಗ್ಗೆ ಒತ್ತಿ ಹೇಳಿದರು. ಹೀಗಾಗಿ, ಕಳೆದ ಎಂಟು ತಿಂಗಳಿಂದಲೇ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ತಯಾರಿ ಮಾಡಿಕೊಂಡಿದೆ ಎಂದು ಮಾಹಿತಿ ನೀಡಿದರು.

ನೆರೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ

ಈ ವರ್ಷ ಎಲ್ಲ ರೀತಿಯಲ್ಲೂ ಸರ್ಕಾರ ಗಂಭೀರ ಸವಾಲುಗಳನ್ನೇ ಎದುರಿಸಿದೆ. ನೆರೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಎಂದು ನಾನು ಪ್ರತಿಪಕ್ಷಗಳನ್ನು ಮತ್ತೊಮ್ಮೆ ವಿನಂತಿ ಮಾಡಿಕೊಳ್ಳುತ್ತೇನೆ. ನಮ್ಮ ಸರಕಾರ ಬಂದ ಕೂಡಲೇ ಪ್ರವಾಹ ಬಂತು. ಅದು ಹತೋಟಿಗೆ ಬಂದ ಕೂಡಲೇ ಕೋವಿಡ್‌ ಬಂತು. ಮತ್ತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನೆರೆ ಬಂತು. ಈಗ ಮತ್ತೆ ಉತ್ತರ ಕರ್ನಾಟಕದಲ್ಲಿ ನೆರೆ ಬಂದಿದೆ. ಬಿಕ್ಕಟ್ಟು ಬಂದಾಗ ಎಲ್ಲರೂ ಒಟ್ಟಾಗಿ ನೊಂದ ಜನರ ನೆರವಿಗೆ ಧಾವಿಸಬೇಕು. ರಾಜಕೀಯ ಮಾತನಾಡುವುದು ಅಕ್ಷಮ್ಯ ಎಂದು ಹೇಳಿದರು.

key words : Graduate-classes-start-offline-online-November- DCM-Dr. C.N. Ashwaththa Narayana