ಅಜ್ಜಿ ಅಸ್ಥಿ ವಿಸರ್ಜೆನೆಗೆ ನದಿಗಿಳಿದ ಮೊಮ್ಮಗ ನೀರುಪಾಲು

ಮಂಡ್ಯ,ಅಕ್ಟೋಬರ್,18,2020(www.justkannada.in) :  ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ.jk-logo-justkannada-logoಶ್ರೀಪ್ರಸಾದ್(32) ಎಂಬುವವರು ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ.

3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ, ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.Grandmother-grandson-drowned-estuary

ಇನ್ನು ಇದೇ ನದಿ ಅಂಚಿನ ಕೃಷಿ ಭೂಮಿಯಲ್ಲಿ ಶೆಡ್ ಹಾಕಿಕೊಂಡು ಅಕ್ರಮವಾಗಿ ಅಸ್ಥಿ ವಿಸರ್ಜೆನೆ ದಂಧೆ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ. ಆದರೆ, ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿದ್ದಾರೆ.

ಸದ್ಯ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಅಜ್ಜಿ ಸಾವಿನ ಜೊತೆಗೆ ಮೊಮ್ಮಗನ ಸಾವು  ಕುಟುಂಬಸ್ಥರಿಗೆ ನುಂಗಲಾರದ ತುತ್ತು ಎನ್ನುವಂತ್ತಾಗಿದ್ದು, ಶೋಕ ಆವರಿಸಿದಂತ್ತಾಗಿದೆ.  ಶ್ರೀರಂಗಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

key words : Grandmother-grandson-drowned-estuary