ಬೆಂಗಳೂರು,ಮಾರ್ಚ್,6,2026 (www.justkannada.in): ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಕೆಳಗಿನಂತೆ ವಿವಿಧ ಇಲಾಖೆಗಳಿಗೆ ಅನುದಾನ ಮೀಸಲಿಟ್ಟಿದ್ದಾರೆ.
ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ.
ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ
ಕಂದಾಯ ಇಲಾಖೆಗೆ 19,843 ಕೋಟಿ ರೂ. ಅನುದಾನ ಹಂಚಿಕೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.
ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆ
ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನ
ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂ. ಅನುದಾನ
ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ
ಆಹಾರ ಇಲಾಖೆಗೆ 7,942 ಕೋಟಿ ರೂ. ಅನುದಾನ ಹಂಚಿಕೆ
ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನ
ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.
ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂ.
ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂ.
ಇತರೆ ಇಲಾಖೆಗಳಿಗೆ ಒಟ್ಟು 1,72,757 ಕೋಟಿ ರೂ. ಅನುದಾನ ಬಜೆಟ್ ನಲ್ಲಿ ಮೀಸಲಿಡಲಾಗಿದೆ.
Key words: grant, department, allocation, budget







