ಕೇಂದ್ರದಿಂದ ಅನುದಾನ ತಾರತಮ್ಯ: ಜನರ ಪರವಾಗಿ ನಾವು ಧ್ವನಿ ಎತ್ತುತ್ತೇವೆ-ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಫೆಬ್ರವರಿ,5,2024(www.justkannada.in):  ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನದ ಹಂಚಿಕೆಯಲ್ಲಿ ತಾರತಮ್ಯ ತೋರುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಕೇಂದ್ರದ ನಡೆ ವಿರುದ್ದ ಫೆಬ್ರವರಿ 7 ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯದ ಜಿಎಸ್ ಟಿ ಪಾಲು ಇನ್ನೂ ಬಂದಿಲ್ಲ. ಕೊರೋನಾ ಸಮಯದಲ್ಲಿ ಜಿಎಸ್ ಟಿ ಪಾಲಿನಲ್ಲೂ ಅನ್ಯಾಯ ಮಾಡಿದೆ. ಬರಗಾಲ ಸಮಯದಲ್ಲೂ ಹಣ  ಬಿಡುಗಡೆ ಮಾಡಿಲ್ಲ. ಕೇಂದ್ರ ನುಡಿದಂತೆ ನಡೆದಿಲ್ಲ. ಮಾನದಂಡದಂತೆ ಕೇಂದ್ರದಿಂದ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ನಾವು ಎಷ್ಟು ದಿನ ಧಮ್ ತಡೆದು ಕೂರಬೇಕು.  ಜನರ ಪರವಾಗಿ ನಾವು ಧ್ವನಿ ಎತ್ತುತ್ತೇವೆ. ಪ್ರತಿಭಟನೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಮನವಿ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ ಮಾಡಿದರು.

Key words: Grant- discrimination -Centre –DCm- DK Shivakumar.