“ಅನುದಾನಿತ ಶಾಲೆಗಳ ಖಾಲಿಯಾದ ಸ್ಥಾನಗಳಿಗೆ ಶಿಕ್ಷಕರ ಭರ್ತಿ” : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು,ಜನವರಿ,24,2021(www.justakannada.in) : ಅನುದಾನಿತ ಶಾಲೆಗಳಲ್ಲಿ ನಿವೃತ್ತಿ ಹಾಗೂ ಮರಣ ಹೊಂದಿದ ಶಿಕ್ಷಕರ ಸ್ಥಾನಗಳಿಗೆ ಭರ್ತಿ ಮಾಡಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದ್ದು, ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.jkಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ವರ್ಗಾವಣೆಯಲ್ಲಿ ಪ್ರಕಟಗೊಂಡಿರುವ ಕಡ್ಡಾಯ ವರ್ಗಾವಣೆ ಶಿಕ್ಷಕರಿಗೆ ಆದ್ಯತೆ ನೀಡಿದ ನಿಯಮಕ್ಕೆ ಕೆಎಟಿ ತಡೆ ನೀಡಿದೆ. ಆದರೆ, ಹೊಸ ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆಗೆ ತಡೆಯಾಜ್ಞೆ ನೀಡಿಲ್ಲ ಎಂದಿದ್ದಾರೆ.Granted,schools,Emptied,positions,Teacher Fill,Minister,S.Suresh Kumarಈ ಬಗ್ಗೆ ಸರ್ಕಾರದ ಅಡ್ವೋಕೆಟ್ ಜನರಲ್ ಜೊತೆ ಚರ್ಚಿಸಿ, ಕೆಎಟಿಗೆ ಪ್ರಕರಣ ತ್ವರಿತಗತಿಯಲ್ಲಿ ವಿಚಾರಣೆ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

key words : Granted-schools-Emptied-positions-Teacher Fill-Minister-S.Suresh Kumar