23 ಹೊಸ ಸೈನಿಕ ಶಾಲೆಗಳ ಆರಂಭಕ್ಕೆ ರಕ್ಷಣಾ ಸಚಿವಾಲಯದಿಂದ ಗ್ರೀನ್ ಸಿಗ್ನಲ್

ಬೆಂಗಳೂರು, ಸೆಪ್ಟೆಂಬರ್ 17, 2023 (www.justkannada.in): 23 ಹೊಸ ಸೈನಿಕ ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದಕ್ಕೆ ಅನುಮೋದನೆ ನೀಡಿದ್ದು, ರಕ್ಷಣಾ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.

ಸ್ವಯಂ ಸೇವಾ ಸಂಸ್ಥೆಗಳು, ಖಾಸಗಿ ಶಾಲೆಗಳು ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನೂರು ಹೊಸ ಸೈನಿಕ ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಸಹಭಾಗಿತ್ವ ಮಾದರಿಯಲ್ಲಿ 23 ಹೊಸ ಸೈನಿಕ ಶಾಲೆಗಳನ್ನು ದೇಶದ ವಿವಿಧ ಭಾಗಗಳಲ್ಲಿ ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ.

ಸೈನಿಕ ಶಾಲೆಗಳ ಸಂಘದಿಂದ ಸಹಭಾಗಿತ್ವ ಮಾದರಿಯಲ್ಲಿ ಈಗಾಗಲೇ 19 ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಇದೀಗ 23 ಹೊಸ ಸೈನಿಕ ಶಾಲೆಗಳ ಆರಂಭಕ್ಕೆ ಅನುಮೋದನೆ ಸಿಕ್ಕಿರುವುದು ನೂರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.