ಆರ್.ಆರ್ ನಗರ ಉಪಚುನಾವಣೆಗೆ ಗ್ರೀನ್ ಸಿಗ್ನಲ್: ತುಳಸಿ ಮುನಿರಾಜು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ,ಅಕ್ಟೋಬರ್,13,2020(www.justkannada.in):  ತುಳಸಿ ಮುನಿರಾಜು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಆರ್ ಆರ್ ನಗರ ಉಪ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಹೈಕೋರ್ಟ್ ಆದೇಶಕ್ಕೆ ತಡೆ ನೀಡಿವಂತೆ ಹಾಗೂ ಆರ್.ಆರ್ ನಗರ ಉಪಚುನಾವಣೆ ಮುಂದೂಡುವಂತೆ ಮನವಿ ಮಾಡಿ ತುಳಸಿಮುನಿರಾಜು ಸುಪ್ರೀಂಕೋರ್ಟ್ ಗೆ ಅರ್ಜಿಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್ ತುಳಿಸಿಮುನಿರಾಜು ಅವರ ಅರ್ಜಿಯನ್ನ ವಜಾಗೊಳಿಸಿದೆ.

ರಾಜರಾಜೇಶ್ವರಿನಗರ ಉಪ ಚುನಾವಣೆಗೆ ತಡೆ ನೀಡೋದಕ್ಕೆ ಸಾಧ್ಯವಿಲ್ಲ ಎಂಬುದಾಗಿ ತಿಳಿಸುವ ಮೂಲಕ, ರಾಜರಾಜೇಶ್ವರಿನಗರ ಉಪ ಚುನಾವಣೆಗೆ  ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮುನಿರತ್ನಗೂ ಬಿಗ್ ರಿಲೀಫ್ ನೀಡಿದೆ.

Key words: Green signal – RR nagar -by-election-Supreme Court- dismisses-Tulsi Muniraju petition