ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ನ್ಯೂನ್ಯತೆ ಕಾಣುತ್ತಿಲ್ಲ- ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್.

ಬೆಂಗಳೂರು,ಆಗಸ್ಟ್,30,2023(www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ನ್ಯೂನ್ಯತೆ ಕಾಣುತ್ತಿಲ್ಲ. ಯೋಜನೆಜಾರಿಗೆ ನನ್ನದು ಕೂಡ ಒಂದು ಅಳಿಲು ಸೇವೆ ಇರಲಿ ಎಂದು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು.

ಇಂದು ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ನನ್ನ ಕ್ಷೇತ್ರದಲ್ಲೂ ಯೋಜನೆ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡುತ್ತೇನೆ . ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ನ್ಯೂನ್ಯತೆ ಇಲ್ಲ ಎಂದರು.

ಇದು ಅರಬೆಂದ ಯೋಜನೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ದೊಡ್ಡವರು ಏನು ಬೇಕಾದರೂ ಮಾತನಾಡಲಿ  ಇದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಇದು ಸರ್ಕಾರದ ಯೋಜನೆ ಮಹಿಳೆಯರಿಗೆ 2 ಸಾವಿರ ರೂ. ಸಿಗುತ್ತದೆ. ಸರ್ಕಾರದ ಯೋಜನೆ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Key words: Grihalakshmi Yojana – BJP MLA -ST Somashekhar.