ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಬಿಗಿ ಪೊಲೀಸ್ ಬಂದೋಬಸ್ತ್.

ಮೈಸೂರು,ಆಗಸ್ಟ್,30,2023(www.justkannada.in):  ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಾಲನೆ ಸಿಗಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ  ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಗೃಹಲಕ್ಷ್ಮೀ ಯೋಜನೆಗೆ ಚಾಲನೆ  ನೀಡಲಿದ್ದಾರೆ.

ಈ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಕಾನೂನು & ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ 2000ಕ್ಕೂ ಹೆಚ್ಚು ಸಿಬ್ಬಂದಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಮುತ್ತುರಾಜ್, 10 ಎಸ್​​ಪಿಗಳು ಸೇರಿ ಅಧಿಕಾರಿಗಳಿಂದ ಭದ್ರತೆ  ವಹಿಸಲಾಗಿದೆ.

Key words: Grihalakshmi Yojana -launched – Mysore –today-police security