Thursday, July 30, 2026

BDA Apartments

Home Front Page ಗೃಹಲಕ್ಷ್ಮೀ  ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇಂದಿನಿಂದಲೇ ಹಣ ಜಮೆ

ಗೃಹಲಕ್ಷ್ಮೀ  ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇಂದಿನಿಂದಲೇ ಹಣ ಜಮೆ

ಮಂಡ್ಯ, ಆಗಸ್ಟ್​​ ,6,2024 (www.justkannada.in):  ) ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಸಿಹಿಸುದ್ದಿ ನೀಡಿದ್ದು, ಇಂದಿನಿಂದಲೇ ಖಾತೆಗೆ ಹಣ ಜಮಾವಣೆ ಆಗುತ್ತದೆ ಎಂದು ತಿಳಿಸಿದ್ದಾರೆ.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್​ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯ ನಂತರ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ  ವರ್ಗಾವಣೆಯಾಗಿರಲಿಲ್ಲ.

Key words: Grihalakshmi Yojana, money, deposite, Lakshmi hebbalkar