ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿತ: ವಧುವಿನ ಮಾಜಿ ಲವರ್ ನಿಂದ ಕೃತ್ಯ ಶಂಕೆ..?

ಚಾಮರಾಜನಗರ, ಜನವರಿ,30,2026 (www.justkannada.in): ಮದುವೆಯ ಆರತಕ್ಷತೆಗೆ ಕಾರಿನಲ್ಲಿ ತೆರಳುತ್ತಿದ್ದ ವರನ ಕಾರು ಅಡ್ಡಿಗಟ್ಟಿ  ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ.

ವರ ರವೀಶ್ ಹಲ್ಲೆಗೊಳಗಾದವರು. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ನಿನ್ನೆ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ.

ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ  ನಡೆಸಿದ್ದಾರೆ. ವಧುವಿನ ಮಾಜಿ ಲವರ್ ನಿಂದ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

6 ತಿಂಗಳ ಹಿಂದೆ ನಯನ ಎನ್ನುವ ಯುವತಿಯೊಂದಿಗೆ ರವೀಶನ ಮದುವೆ ನಿಶ್ಚಯವಾಗಿತ್ತು. ಅದರಂತೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ವರ ರವೀಶ್  ತೆರಳುತ್ತಿದ್ದ ವೇಳೆ ನಡೆದಿದೆ.

Key words: Groom, stabbed, wedding reception, Chamaraj nagar