2.14 ಕೋಟಿ ಗ್ರಾಹಕರಿಗೆ ಗೃಹಜ್ಯೋತಿ ಲಾಭ: ಜೂ.15ರಿಂದ ಅರ್ಜಿ ಸಲ್ಲಿಕೆ ಆರಂಭ- ಸಚಿವ ಕೆ.ಜೆ ಜಾರ್ಜ್.

ಬೆಂಗಳೂರು,ಜೂನ್,7,2023(www.justkannada.in): 2.14 ಕೋಟಿ ಗ್ರಾಹಕರಿಗೆ ಗೃಹಜ್ಯೋತಿ ಯೋಜನೆಯ ಲಾಭ ದೊರೆಯಲಿದೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ  ಯೋಜನೆ ಲಾಭ ಪಡೆಯಲು ಕರಾರುಪತ್ರ ಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್​ ತಿಳಿಸಿದರು.

ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್​ , 200 ಯೂನಿಟ್ ​​ಗಿಂತ ಕಡಿಮೆ ಬಳಕೆದಾರರು 2.16 ಕೋಟಿ ಇದ್ದಾರೆ. ಗೃಹಜ್ಯೋತಿ ಯೋಜನೆ ಲಾಭ ಪಡೆಯಲು ಸೇವಾಸಿಂಧು ಆ್ಯಪ್​ ನಲ್ಲಿ ಜನ ಅರ್ಜಿ ಹಾಕಬೇಕು. ಆಧಾರ್ ಕಾರ್ಡ್ ಆರ್ .ಆರ್ ನಂಬರ್ ಗೆ ಲಿಂಕ್ ಆಗಿರಬೇಕು.   ಫ್ರಿ ವಿದ್ಯುತ್ ಗೆ ದಾಖಲೆಗಳನ್ನ ನೀಡಬೇಕು ಎಂದರು.

ಜುಲೈ ತಿಂಗಳಿನ ಬಿಲ್ ಆಗಸ್ಟ್​​ನಲ್ಲಿ ಪಾವತಿ ಮಾಡುವುದು ಬೇಡ. 2 ಲಕ್ಷ ಗ್ರಾಹಕರು ಮಾತ್ರ 200 ಯೂನಿಟ್ ​​ಗಿಂತ ಹೆಚ್ಚಾಗಿ ಬಳಕೆ ಮಾಡ್ತಾರೆ. 2 ಕೋಟಿ 14 ಲಕ್ಷ ಗ್ರಾಹಕರಿಗೆ ಈ ಯೋಜನೆ ಲಾಭ ಸಿಗುತ್ತದೆ ಎಂದು ಸಚಿವ ಕೆ.ಜೆ.ಜಾರ್ಜ್​ ತಿಳಿಸಿದ್ದಾರೆ.

ಜೂನ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.  ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ನಲ್ಲಿ ಅರ್ಜಿ ಸಲ್ಲಿಸಬಹುದು  ಜುಲೈನಿಂದಲೇ ಯೋಜನೆ ಲಾಭ ಸಿಗಲಿದೆ. ಜುಲೈ ಒಳಗೆ ಬಳಸಿರೋ ಕರೆಂಟ್ ಬಿಲ್ ಪಾವತಿಸಬೇಕು.  ಮೊಬೈಲ್ ಆ್ಯಪ್ ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶವಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

Key words: gruhajyothi-plan-benefit – 2.14 crore –consumers – Minister -KJ George.