ಗ್ಯಾರಂಟಿ ಯೋಜನೆ ರದ್ದು ಮಾಡಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ.

ಬೆಂಗಳೂರು,ಜನವರಿ,31,2024(www.justkannada.in): ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ರೆ ಗ್ಯಾರಂಟಿ ಯೋಜನೆ ರದ್ದು ಮಾಡುತ್ತೇವೆ ಎಂಬ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಗ್ಯಾರಂಟಿ ಮುಂದುವರೆಯಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.  ಎಚ್ಚರಿಕೆಯಿಂದಿರಿ ಎಂದು ಬಾಲಕೃಷ್ಣ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ರದ್ದು ಮಾಡಲ್ಲ. 5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದೆ ಎಂದು ತಿಳಿಸಿದರು.

Key words: Guarantee plan – not –cancelled-DCM -DK Shivakumar-clarified.