ಬೆಂಗಳೂರು,ಮಾರ್ಚ್,6,2026 (www.justkannada.in): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಹಣ ಮೀಸಲಿಟ್ಟಿದ್ದಾರೆ.
ಇಂದು ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ಅನುದಾನ ಮೀಸಲಿಡಲಾಗಿದೆ, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಕೋಟಿ ರೂ. ಹಣ ಹಣ ಮೀಸಲಿಡಲಾಗುವುದು. ಅನ್ನಭಾಗ್ಯ ಯೋಜನೆಗೆ 6200 ಕೋಟಿ ರೂ. ಎಂದು ಘೋಷಿಸಿದರು.
ಇನ್ನು ನಿರುದ್ಯೋಗಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 3 ಸಾವಿರ ರೂ. ಹಾಕುವ ಯುವನಿಧಿ ಯೋಜನೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ.
Key words: CM Siddaramaiah, allocated, money , guarantee schemes.







