Sunday, September 20, 2026

BDA Apartments

ಸಂಕಷ್ಟಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ವೇತನ ನೀಡಿ- ಸರ್...
Home Front Page ಸಂಕಷ್ಟಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ವೇತನ ನೀಡಿ- ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ...

ಸಂಕಷ್ಟಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ವೇತನ ನೀಡಿ- ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಒತ್ತಾಯ…

ಬೆಂಗಳೂರು,ಜೂ,30,2020(www.justkannada.in):  ಕೊರೋನಾ ಸೋಂಕಿನಿಂದಾಗಿ ಲಾಕ್ ಡೌನ್ ಮಾಡಿದ್ದ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.guest-lecturer-salary-three-months-former-cm-hd-kumaraswamy-urges-government

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕರೋನ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ  ತುರ್ತು ನೆರವಿಗೆ ಧಾವಿಸಬೇಕು. ಅತಂತ್ರರಾಗಿರುವ ಅತಿಥಿ  ಉಪನ್ಯಾಸಕರು  ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

Key words: guest lecturer –salary-three months’-Former CM HD Kumaraswamy -urges – government.