ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ.

ನವದೆಹಲಿ,ಜೂನ್,24,2022(www.justkannada.in):  2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ತನಿಖಾ ತಂಡ (SIT) ನೀಡಿದ್ದ ಕ್ಲೀನ್ ಚಿಟ್  ಪ್ರಶ್ನಿಸಿ  ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿ ಜಾಕಿಯಾ ಜಫ್ರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ  ಮೋದಿ ಯವರಿಗೆ ನೀಡಲಾಗಿದ್ದ ಕ್ಲೀನ್​ಚಿಟ್ ಆದೇಶವನ್ನು ಸುಪ್ರೀಂ ಕೋರ್ಟ್​ ಎತ್ತಿ ಹಿಡಿದಿದೆ.

ಹಾಗೆಯೇ ಎಸ್ ಐಟಿ ತನಿಖೆಯಲ್ಲಿ ಕಾನೂನು ಉಲ್ಲಂಘನೆಯಾಗಿರುವುದು ಕಾಣ್ತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

Key words: Gujarat riots- Supreme Court -dismisses -appeal -against -PM Modi