Saturday, September 5, 2026

BDA Apartments

Home Front Page ಆರೋಗ್ಯದಲ್ಲಿ ಚೇತರಿಕೆ: ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

ಆರೋಗ್ಯದಲ್ಲಿ ಚೇತರಿಕೆ: ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು, ಅಕ್ಟೋಬರ್, 13,2025 (www.justkannada.in):  ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಅನಾರೋಗ್ಯಕ್ಕೊಳಗಾಗಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅಕ್ಟೋಬರ್ 6 ರಂದು ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.  ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಿದ್ದಾರೆ.

ಚಿಕಿತ್ಸೆ ನೀಡಿದ ಬಳಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು,  ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ದೇವೇಗೌಡರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭ ಹಾರೈಸಿದ್ದರು.

Key words: Health, Former Prime Minister, H.D. Deve Gowda, discharged , hospital