ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ ಎಂದಿದ್ದ ಡಾ.ಕೆ.ಸುಧಾಕರ್ ಗೆ ತಿರುಗೇಟು ಕೊಟ್ಟ ಹೆಚ್.ವಿಶ್ವನಾಥ್

ಬೆಂಗಳೂರು,ಮೇ,19,2023(www.justkannada.in):  ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ ಎಂದು ಆರೋಪಿಸಿದ್ದ ಮಾಜಿ ಸಚಿವ ಡಾ. ಕೆ ಸುಧಾಕರ್​ ಗೆ ಎಂಎಲ್​ ಸಿ ಹೆಚ್.ವಿಶ್ವನಾಥ್​​ ತಿರುಗೇಟು ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಹೆಚ್.ವಿಶ್ವನಾಥ್, ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ನಾನು ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ.ಕೆ.ಸುಧಾಕರ್​​ ಮಾತನಾಡ್ತಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಒಗ್ಗಟ್ಟಿನಿಂದ ಸರ್ಕಾರ ಮುನ್ನಡೆಸುತ್ತಾರೆ. ನಾನು ಕೂಡ ಈ ಸರ್ಕಾರಕ್ಕೆ ಸಲಹೆ ನೀಡುತ್ತೇನೆ. ಬಿಜೆಪಿ ಮಾಡಿದ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಎಂದು ತಿಳಿಸಿದರು.

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎನ್ನುವ ಮೂಲಕ ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯನವರ ಪಾತ್ರವಿತ್ತು ಎಂದು ಡಾ.ಕೆ.ಸುಧಾಕರ್ ಹೇಳಿದ್ದರು.

Key words: H. Vishwanath– Dr. K. Sudhakar – Siddaramaiah – motivated – fall – coalition government