Tuesday, September 15, 2026

BDA Apartments

5ನೇ ದಿನ ಹಾಲು-ತುಪ್ಪ ಬಿಡುವ ಕಾರ್ಯ: ಅಪ್ಪು ಕುಟುಂಬದ ನಿರ್ಧಾರ BDA JK_Adv BDA Adv
Home Front Page 5ನೇ ದಿನ ಹಾಲು-ತುಪ್ಪ ಬಿಡುವ ಕಾರ್ಯ: ಅಪ್ಪು ಕುಟುಂಬದ ನಿರ್ಧಾರ

5ನೇ ದಿನ ಹಾಲು-ತುಪ್ಪ ಬಿಡುವ ಕಾರ್ಯ: ಅಪ್ಪು ಕುಟುಂಬದ ನಿರ್ಧಾರ

ಬೆಂಗಳೂರು, ಅಕ್ಟೋಬರ್ 31, 2021 (www.justkannada.in): ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದೆ. 5ನೇ ದಿನ ಹಾಲು-ತುಪ್ಪ ಬಿಡುವ ಕಾರ್ಯವನ್ನು ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್​ ಹೇಳಿಕೆ ನೀಡಿದ್ದಾರೆ. ಕಂಠೀರವ ಸ್ಟುಡಿಯೋ ಒಳಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿವಿಧ ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪುನೀತ್‌ರಾಜ್‌ಕುಮಾರ್ ಅಂತಿಮ ದರ್ಶನ ಪಡೆದರು.