Saturday, September 19, 2026

BDA Apartments

ನಾನೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಬಲ್ಲೆ: ನನ್ನನ್ನ ಪರಿಗಣಿಸಿ –‘ಕೈ’ ...
Home Front Page ನಾನೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಬಲ್ಲೆ: ನನ್ನನ್ನ ಪರಿಗಣಿಸಿ –‘ಕೈ’ ಹೈ ಕಮಾಂಡ್ ಗೆ ಕೆ.ಹೆಚ್...

ನಾನೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಬಲ್ಲೆ: ನನ್ನನ್ನ ಪರಿಗಣಿಸಿ –‘ಕೈ’ ಹೈ ಕಮಾಂಡ್ ಗೆ ಕೆ.ಹೆಚ್ ಮುನಿಯಪ್ಪ ಮನವಿ…

ಬೆಂಗಳೂರು,ಜ,15,2020(www.justkannada.in): ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್ ತೀವ್ರ ಕಸರತ್ತು ನಡೆಸುತ್ತಿದ್ದು ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಕೆಹೆಚ್ ಮುನಿಯಪ್ಪ ಸಹ ಲಾಬಿ ನಡೆಸಿದ್ದಾರೆ.

ನಾನೂ ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಬಲ್ಲೆ. ಹೀಗಾಗಿ ನನ್ನನ್ನೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಕಾಂಗ್ರೆಸ್  ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಯಾವುದೇ ನಿರೀಕ್ಷೆ ಬೇಡ. ನಿಮಗೆ ಎಐಸಿಸಿಯಲ್ಲಿ ಹುದ್ದೆ ನೀಡಲಾಗುವುದು ಎಂದು ಕೆ.ಹೆಚ್ ಮುನಿಯಪ್ಪಗೆ ಕಾಂಗ್ರೆಸ್ ಹೈಕಮಾಂಡ್ ಭರವಸೆ ನೀಡಿದೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಮಾಜಿ ಸಿಎಂ ಸಿದ್ಧರಾಮಯ್ಯ ನಿನ್ನೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ರಾಜ್ಯಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ. ಇಂದು ರಾಹುಲ್ ಗಾಂಧಿ ಅವರನ್ನ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ.

Key words: handle – KPCC president-position- KH Muniyappa- appeals – High Command