ಮಂಡ್ಯದಲ್ಲಿ ತೀವ್ರಗೊಂಡ ಹನುಮ ಧ್ವಜ ಹೋರಾಟ: ಫ್ಲೆಕ್ಸ್ ಹರಿದು ಆಕ್ರೋಶ: ಲಾಠಿಚಾರ್ಜ್.

ಮಂಡ್ಯ,ಜನವರಿ,29,2024(www.justkannada.in):  ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ವಿವಾದ ಕುರಿತು ಬಿಜೆಪಿ ಹೋರಾಟ ತೀವ್ರಗೊಂಡಿದ್ದು,  ನಗರದಲ್ಲಿ ಸಿಕ್ಕ ಸಿಕ್ಕ ಕಾಂಗ್ರೆಸ್ ಬ್ಯಾನರ್ ಗಳನ್ನು  ಹರಿದು ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಡಿಸಿ ಕಚೇರಿಗೆ ಸಾಗೋ ದಾರಿಯುದ್ಧಕ್ಕೂ ಕಾಂಗ್ರೆಸ್ ಪಕ್ಷದ ಬ್ಯಾನರ್ ಗಳನ್ನು ಹರಿದು ಹಾಕಲಾಗುತ್ತಿದೆ. ಸಿಎಂ ಸಿದ್ಧರಾಮಯ್ಯ, ಗಣಿಗ ರವಿ ಬ್ಯಾನರ್ ಮೇಲೆ ಕಲ್ಲು ತೂರಾಟ ನಡೆಸಿ, ಫ್ಲೆಕ್ಸ್ ಹಿದು ಹರಿದು ಹಾಕಿ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಕಾಂಗ್ರೆಸ್ ಶಾಸಕ ಗಣಿಕ ರವಿ ಬ್ಯಾನರ್ ಹರಿದು ಹಾಕುವ ವೇಳೆಯಲ್ಲಿ ಮಾತಿನ ಚಕಮಕಿ ನಡೆದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು  ಲಾಠಿ ಚಾರ್ಜ್ ನಡೆಸಿದ್ದಾರೆ.

.ಪೊಲೀಸರು ನಡೆಸಿದ  ಲಾಠಿ ಚಾರ್ಜ್ ನಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾನಿರತ ಕಾರ್ಯಕರ್ತರು ಮುಂದಾಗಿದ್ದಾರೆ.

Key words:  Hanuman flag -fight –Mandya-protest-bjp-Lathicharge.