ಕೆರೆಗೋಡಿನಲ್ಲಿ ಹನುಮ ಧ್ವಜ ತೆರವು ವಿವಾದ: ಬಿಜೆಪಿ- ಜೆಡಿಎಸ್ ನಾಯಕರಿಂದ ಪಾದಯಾತ್ರೆ.

ಮಂಡ್ಯ,ಜನವರಿ,29,2024(www.justkannada.in): ಮಂಡ್ಯ ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿಯಾಗಿ ಪಾದಯಾತ್ರೆ ಕೈಗೊಂಡಿದ್ದಾರೆ.

ಕೆರೆಗೋಡು ಗ್ರಾಮದಿಂದ ಪಾದಯಾತ್ರೆ ಆರಂಭವಾಗಿದ್ದು 15 ಕಿ.ಮೀವರೆಗೆ ಪಾದಯಾತ್ರೆ ಸಾಗಲಿದೆ. ಪಾದಯಾತ್ರೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.  ಹಿಂದೂ ಕಾರ್ಯಕರ್ತರು ಜೈಶ್ರೀರಾಮ್ ಎಂದು ಘೋಷಣೆ ಮೊಳಗಿಸುತ್ತಿದ್ದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕರೆ ನೀಡಿದ್ದು, ಬೆಂಗಳೂರಿನಲ್ಲೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

Key words:  Hanuman flag –Keregodu- BJP-JDS -leaders -protest