Saturday, September 19, 2026

BDA Apartments

ಮದುವೆಗೂ ಮುನ್ನವೇ ಅಪ್ಪನಾಗುತ್ತಿದ್ದಾರೆ ಹಾರ್ದಿಕ್ ಪಾಂಡ್ಯ BDA JK_Adv BDA Adv
Home Front Page ಮದುವೆಗೂ ಮುನ್ನವೇ ಅಪ್ಪನಾಗುತ್ತಿದ್ದಾರೆ ಹಾರ್ದಿಕ್ ಪಾಂಡ್ಯ

ಮದುವೆಗೂ ಮುನ್ನವೇ ಅಪ್ಪನಾಗುತ್ತಿದ್ದಾರೆ ಹಾರ್ದಿಕ್ ಪಾಂಡ್ಯ

ಮುಂಬೈ, ಜೂನ್ 01, 2020 (www.justkannada.in): ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಗೆಳತಿ ನತಾಶಾ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಈ ವಿಚಾರವನ್ನು ಸ್ವತಃ ಹಾರ್ದಿಕ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಹಲವು ದಿನಗಳಿಂದ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದಾರೆ.

ಕೆಲವು ತಿಂಗಳುಗಳ ಹಿಂದಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇನ್ನೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿಲ್ಲ. ಮದುವೆಗೂ ಮುನ್ನ ತಾವು ತಂದೆಯಾಗುತ್ತಿರುವ ವಿಚಾರವನ್ನು ಹಂಚಿಕೊಂಡಿರುವ ಹಾರ್ದಿಕ್ ನಮ್ಮ ಜೀವನದ ಅತ್ಯಂತ ಮಹತ್ವದ ಕ್ಷಣಗಳಿವು ಎಂದಿದ್ದಾರೆ.