ಬೆಂಗಳೂರು,ನವೆಂಬರ್,6,2025 (www.justkannada.in): ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್(55) ಇಂದು ನಿಧನರಾಗಿದ್ದಾರೆ.
ಹಿರಿಯ ನಟ ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲ ತಿಂಗಳುಗಳಿಂದಲೂ ಸತತವಾಗಿ ಚಿಕಿತ್ಸೆಯನ್ನು ಪಡೆಯುತ್ತಲೇ ಇದ್ದರು ಹರೀಶ್ ರಾಯ್. ಇದೀಗ ಕೊನೆಗೆ ನಿಧನ ಹೊಂದಿದ್ದಾರೆ.
ತಮ್ಮ ಚಿಕಿತ್ಸೆಗಾಗಿ ಹರೀಶ್ ರಾಯ್ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಚಿತ್ರರಂಗದ ಹಲವು ಮಂದಿ ಸಹಾಯ ಮಾಡಿದ್ದರು ಎನ್ನಲಾಗಿದೆ. ಹರೀಶ್ ರಾಯ್ ಅವರು ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಹರೀಶ್ ರಾಯ್ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದಾರೆ. ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಜೋಡಿ ಹಕ್ಕಿ, ತಾಯವ್ವ, ಓಂ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
Key words: Kannada, Famous, villain actor, Harish Roy, passes away







