ಹರ್ಷ ಕೊಲೆ ಪ್ರಕರಣ ಬೇರೆ ತನಿಖಾ ಸಂಸ್ಥೆಗೆ ವಹಿಸುವ ಚಿಂತನೆ ಇಲ್ಲ- ಗೃಹ ಸಚಿವ ಅರಗ ಜ್ಞಾನೇಂದ್ರ.

ಬೆಂಗಳೂರು,ಫೆಬ್ರವರಿ,24,2022(www.justkannada.in):  ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನ ಬೇರೆ ತನಿಖಾ ಸಂಸ್ಥೆಗೆ ವಹಿಸುವ ಚಿಂತನೆ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ,  ಸದ್ಯ ಶಿವಮೊಗ್ಗ ನಗರದಲ್ಲಿ ಶಾಂತಿ ನೆಲೆಸಿದೆ. ಶಿವಮೊಗ್ಗದಲ್ಲಿ ಪೊಲೀಸ್ ವೈಪಲ್ಯ ಆಗಿಲ್ಲ. ಸಿಸಿಬಿ ಜಂಟಿ ಆಯುಕ್ತರು ಭೇಟಿ ನೀಡಲಿದ್ದಾರೆ.  ಕಾನೂನು ಸುವ್ಯವಸ್ಥೆ ಪರಿಶೀಲನೆ ನಡೆಸಲಿದ್ದಾರೆ ಎಂದರು.

ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಪ್ರಕರಣ ಬೇರೆ ತನಿಖಾ ಸಂಸ್ಥೆಗೆ ವಹಿಸುವ ಚಿಂತನೆ ಇಲ್ಲ ಎಂದು ಅರಗ ಜ್ಞಾನೇಂದ್ರ ತಿಳಿಸಿದರು.

Key words: Harsha –murder-case-Home Minister -Araga Jnanendra.