ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣ: 18 ಕಡೆಗಳಲ್ಲಿ ಎನ್ ಐಎ ದಾಳಿ, ಪರಿಶಿಲನೆ.

ಶಿವಮೊಗ್ಗ,ಜೂನ್,30, 2022(www.justkannada.in): ಹಲವು ದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದಿದ್ಧ ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ತನಿಖಾ ದಳ(ಎನ್ ಐಎ)  ಶಿವಮೊಗ್ಗದ 18 ಕಡೆಗಳಲ್ಲಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಬಂದಿಳಿದಿದ್ದ ಎನ್ ಐಎ ತಂಡ ಇಂದು 18 ಆರೋಪಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದೆ. ಇಂದು ಬೆಳಿಗ್ಗೆ 5 ಗಂಟೆಗೆ ದಾಳಿ ಮಾಡಿರುವ ಎನ್ ಐಎ  ಮಹತ್ವದ ಮಾಹಿತಿಯನ್ನ ಕಲೆ ಹಾಕಿದ್ದಾರೆ  ಎಂದು ಹೇಳಲಾಗುತ್ತಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಫೆಬ್ರವರಿ 20 ರಂದು ಶಿವಮೊಗ್ಗದಲ್ಲಿ ರಾತ್ರಿ 9 ಗಂಟೆ ವೇಳೆಗೆ ಬಜರಂಗ ದಳದ ಕಾರ್ಯಕರ್ತ ಹರ್ಷನನ್ನ  ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದರು.

Key words: Harsha-murder-case – Shimoga- NIA -raids