ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇಗುಲದ ಬಾಗಿಲು ಓಪನ್

ಹಾಸನ, ಅಕ್ಟೋಬರ್,9,2025 (www.justkannada.in):  ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಯಿತು.

ಇಂದಿನಿಂದ ಅಕ್ಟೋಬರ್,23ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಇಂದು ಅರಸು ವಂಶಸ್ಥರು ಬನ್ನಿ ಕಡಿದ ನಂತರ ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಡಿಸಿ, ಎಸ್ಪಿ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು.

ನಾಳೆಯಿಂದ ಸಾರ್ವಜನಿಕರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ವಿಶೇಷ ದರ್ಶನಕ್ಕೆ ಭಕ್ತರಿಗೆ 300 ರೂ. 1000 ರೂ. ಪಾಸ್ ವ್ಯವಸ್ಥೆ ಮಾಡಲಾಗಿದೆ.

Key words: Hasanamba Temple, doors,  opened, Devotees