ಹಾಸನ, ಅಕ್ಟೋಬರ್, 29,2026 (www.justkannada.in): ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಾಗಿದ್ದು ನಾಳೆಯಿಂದ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. 
ಇಂದಿನಿಂದ ನ.11ರವರೆಗೆ ಹಾಸನಾಂಬ ದರ್ಶನೋತ್ಸವ ನಡೆಯಲಿದ್ದು, ಇಂದು ಗೊನೆಯುಳ್ಳ ಬಾಳೆ ಕಂಬ ಕಡಿದ ಬಳಿಕ ಗರ್ಭಗುಡಿ ಬಾಗಿಲು ತೆರೆಯಲಾಯಿತು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಶ್ರೀ, ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ, ಮುಜರಾಯಿ ಸಚಿವ ಬಸವಂತಪ್ಪ, ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಡಿಸಿ ಕೆ.ಎಸ್.ಲತಾಕುಮಾರಿ, ಎಸ್ಪಿ ಶುಭನ್ವಿತಾ ಸೇರಿ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಇಂದು ಮತ್ತು ಕೊನೆಯ ದಿನ ಹಾಸನಾಂಬೆಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಲಕ್ಷಾಂತರ ಜನರು ಈ ಬಾರಿಯೂ ಆಗಮಿಸುವ ನಿರೀಕ್ಷೆ ಇದ್ದು ಭದ್ರತೆಗಾಗಿ 2 ಸಾವಿರ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.






