ಎ.ಮಂಜುರನ್ನ ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಂಡು ಮುಂದಿನ ಚುನಾವಣೆಗೆ ಟಿಕೆಟ್ ನೀಡುವಂತೆ ಒತ್ತಾಯ.

ಹಾಸನ,ಜುಲೈ,9,2021(www.justkannada.in):  ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಸಚಿವ ಎ. ಮಂಜು ಅವರನ್ನ ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಗೆ ಒತ್ತಾಯಿಸಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಗೆ  ಈ ರೀತಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಎ.ಮಂಜುರನ್ನ ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಂಡು ಹೊಳೇನರಸೀಪುರದಿಂದ ಮುಂದಿನ ಚುನಾವಣೆಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಕಾರ್ಯಕರ್ತರ ಅಭಿಪ್ರಾಯ ಆಲಿಸಿದ ಆರ್.ದೃವನಾರಾಯಣ್, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಮತ್ತು ಸಿಎಲ್ ಪಿ ನಾಯಕರ ಗಮನಕ್ಕೆ ತರುತ್ತೇನೆ. ಕಾಂಗ್ರೆಸ್ ಮುಖಂಡರು, ಜಿಲ್ಲಾಧ್ಯಕ್ಷರು, ಎ. ಮಂಜು ಅವರ ಜತೆ ಚರ್ಚಿಸುತ್ತೇವೆ ಎಂದು ಭರವಸೆ ನೀಡಿದರು.

ಎ.ಮಂಜು ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದರು. ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಬಾರದಿತ್ತು. ಕೋಮುವಾದಿ ಪಕ್ಷಕ್ಕೆ ಹೋಗಿದ್ದು ತಪ್ಪು. ಈಗ ಎ.ಮಂಜು ಅವರಿಗೆ ಮನವರಿಕೆಯಾಗುತ್ತಿದೆ. ಪಕ್ಷಕ್ಕೆ ಸೇರಿಸಿಕೊಳ್ಳುವ  ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಆರ್.ಧೃವನಾರಾಯಣ್ ತಿಳಿಸಿದರು.

Key words: Hassan-A. Manju-rejoin-Congress –worker-R.Dhruvanarayan