ಬೆಂಗಳೂರು, ನ.೧೩,೨೦೨೫: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ ಸಚಿವ ಸಂಪುಟದ ಅನುಮೋದನೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ ಅಗತ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳನ್ನು ರೂ.27.92 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ನೆಲ ಮತ್ತು ಮೊದಲನೇ ಮಹಡಿಗೆ ಅವಶ್ಯವಿರುವ ಸರ್ವೀಸಸ್ ಗಳನ್ನು ರೂ.21.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
key words: Hassan, Cabinet approves, 250-bed super specialty hospital

SUMMARY:
Hassan: Cabinet approves 250-bed super specialty hospital.







