Thursday, August 6, 2026

BDA Apartments

Home Front Page ಪಡಿತರ ಅಕ್ರಮ ತಡೆಯಲು ಜಾಗೃತ ದಳ ರಚನೆಗೆ ತೀರ್ಮಾನ- ಆಹಾರ ಸಚಿವ ಕೆ.ಗೋಪಾಲಯ್ಯ….

ಪಡಿತರ ಅಕ್ರಮ ತಡೆಯಲು ಜಾಗೃತ ದಳ ರಚನೆಗೆ ತೀರ್ಮಾನ- ಆಹಾರ ಸಚಿವ ಕೆ.ಗೋಪಾಲಯ್ಯ….

ಹಾಸನ, ಸೆಪ್ಟಂಬರ್,9,2020(www.justkannada.in):  ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.jk-logo-justkannada-logo

ಚನ್ನರಾಯಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ,  ರಾಜ್ಯದಲ್ಲಿ ಪಡಿತರ ಅಕ್ರಮ ದಾಸ್ತಾನು ಮಾರಾಟ ಮಾಡುತ್ತಿರುವ ದೂರುಗಳು‌ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಾಯಿಂಟ್ ಡೈರೆಕ್ಟರ್ ನೇತೃತ್ವದಲ್ಲಿ ಜಾಗೃತದಳ ರಚನೆಗೆ ಚಿಂತನೆ ನಡೆಸಲಾಗಿದೆ ಈ ಮೂಲಕ ಅಕ್ರಮ ತಡೆಗೆ ಕಠಿಣ ಕ್ರಮವಹಿಸಲಾಗಿದೆ ಎಂದರು.

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ 800 ಚೀಲ ರಾಗಿ ಅಕ್ರಮ ಸಾಗಾಣೆ ಬಗ್ಗೆ ಮಾಹಿತಿ ಪಡೆಯಲಾಗಿದೆ. ಅಲ್ಲದೆ ಜಿಲ್ಲಾ ಆಹಾರ ಉಪ ನಿರ್ದೇಶಕರೊಂದಿಗೆ ಮಾತನಾಡಿದ್ದು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.hassan-food-minister-k-gopalaiah-illicit-rations-vigilante-formation

ರಾಜ್ಯದಲ್ಲಿ ಎಲ್ಲೇ ಅಕ್ರಮ ಪಡಿತರ ಮಾರಾಟ ದಾಸ್ತಾನು ಮಾಡಿದವರ ವಿರುದ್ಧ ಹಾಗೂ ದಾಸ್ತಾನು ಮಾಡಲು ಸಹಕರಿಸುವ ವ್ಯಕ್ತಿಗಳ ವಿರುದ್ಧ ವೂ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

Key words: Hassan- Food Minister- K. Gopalaiah- Illicit –rations- Vigilante -formation