ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ.

ಹಾಸನ,ಜೂನ್,23,2021(www.justkannada.in): ಪೆಟ್ರೋಲ್, ಡೀಸೆಲ್,ಗ್ಯಾಸ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಹಾಸನದಲ್ಲಿ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.jk

ಹಾಸನ ಡಿಸಿ ಕಚೇರಿ ಎದುರು ಜಮಾಯಿಸಿದ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ  ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಶಾಸಕರಾದ ಲಿಂಗೇಶ್ಮ ಶಿವಲಿಂಗೇಗೌಡ, ಕುಮಾರಸ್ವಾಮಿ ಸೇರಿ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Key words: Hassan-JDS -protests –against- petrol-diesel-gas –price- hike