‘ಅಶ್ವತ್ಥಾಮನ’ ಪೌರಾಣಿಕ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ

ಬೆಂಗಳೂರು, ನವೆಂಬರ್ 03, 2020 (www.justkannada.in): ಹ್ಯಾಟ್ರಿಕ್ ಹೀರೋ ಶಿವಣ್ಣ ಅಶ್ವತ್ಥಾಮನ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಹೌದು. ಪೌರಾಣಿಕ ಸಿನಿಮಾದಲ್ಲಿ ಕಾಣಿಸಿಕೊಳ್ಳಲು ಶಿವಣ್ಣ ರೆಡಿಯಾಗಿದ್ದಾರೆ. ಅವನೇ ಶ್ರೀಮನ್ನಾರಾಯಣ ಸಿನಿಮಾ ನಿರ್ದೇಶಿಸಿದ್ದ ಸಚಿನ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ.

ಈ ಸಿನಿಮಾದ ಸ್ಕ್ರಿಪ್ಟ್ ಈಗಾಗಲೇ ರೆಡಿಯಾಗಿದ್ದು, ಸದ್ಯದಲ್ಲೇ ಟೈಟಲ್ ಅನೌನ್ಸ್ ಮಾಡುವುದಾಗಿ ನಿರ್ಮಾಪಕ ಪುಷ್ಕರ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.

ಮಹಾಭಾರತದ ಅಶ್ವತ್ಥಾಮ ಪಾತ್ರದ ಕುರಿತಾಗಿ ಪೌರಾಣಿಕ ಸಿನಿಮಾವೊಂದನ್ನು ಮಾಡುವುದಾಗಿ ಘೋಷಿಸಿದ್ದು, ಇದಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಯಕರಾಗಲಿದ್ದಾರೆ ಎಂದು ತಿಳಿಸಿದ್ದಾರೆ.