ಅತ್ಯಾಚಾರ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ.

ಹಾವೇರಿ,ಜನವರಿ,15,2024(www.justkannada.in): ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಧರ್ಮದವರಾಗಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ. ಯಾರು ಕಾನೂನನ್ನು ಕೈ ತೆಗೆದುಕೊಂಡಿದ್ದಾರೊ ಅವರಿಗೆ ಶಿಕ್ಷೆ ನೀಡಲಾಗುತ್ತದೆ. ಯಾರನ್ನು ಕೂಡ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗ ತಾನೇ ಸಂತ್ರಸ್ತ ಕುಟುಂಬಸ್ಥರು ಅರ್ಜಿಯನ್ನು ಕೊಟ್ಟಿದ್ದಾರೆ. ಸರ್ಕಾರ ಅರ್ಜಿಯನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ತಮ್ಮ ವಿರುದ್ದ ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನದಲ್ಲಿ  ವಾಗ್ದಾಳಿ ನಡೆಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ್ ಕುಮಾರ್ ಹೆಗಡೆ ಅವರು ಇವತ್ತಿನವರೆಗೂ ನಾಪತ್ತೆಯಾಗಿದ್ದರು.ಏಕಾಏಕಿ ಚುನಾವಣೆ ಬಂದ ಮೇಲೆ ಕಾಣಿಸಿಕೊಂಡಿದ್ದಾರೆ.ಅವರು ಕ್ಷೇತ್ರಕ್ಕೆ ಏನಾದರೂ ಕೆಲಸ ಮಾಡಿದ್ದಾರ? ಎಂಪಿ ಆಗಿ ಬಡವರ ಕಷ್ಟ ಕೇಳಿದ್ದಾರಾ?  ಎಂದು ತಿರುಗೇಟು ನೀಡಿದರು.

Key words: haveri-Rape case-Strict action-against – accused- CM Siddaramaiah.