ನೂತನ ಸಚಿವರಾಗಿ ಹೆಚ್.ಸಿ ಮಹದೇವಪ್ಪ, ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್ ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು,ಮೇ,27,2023(www.justkannada.in): ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು ಸಚಿವರಾಗಿ ಡಾ.ಹೆಚ್​. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ​​ಪ್ರಮಾಣವಚನ ಸ್ವೀಕರಿಸಿದರು.

ನೂತನ ಸಚಿವರಾಗಿ ಎನ್​​. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹಾಗೆಯೇ ನೂತನ ಸಚಿವರಾಗಿ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ್ ಪಾಟೀಲ್ ಸಹ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

Key words: HC Mahadevappa- Ishwar Khandre- Dinesh Gundurao -sworn – new ministers.