ಹಾಸನ ಟಿಕೆಟ್ ಬಗ್ಗೆ ಹೆಚ್.ಡಿ ದೇವೇಗೌಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ- ಮಾಜಿ ಸಚಿವ ಹೆಚ್.ಡಿ ರೇವಣ್ಣ.

ಹಾಸನ,ಏಪ್ರಿಲ್,11,2023(www.justkannada.in): ಹಾಸನ ಕ್ಷೇತ್ರದ ಟಿಕೆಟ್ ವಿಚಾರ ಜೆಡಿಎಸ್ ಗೆ ಕಗ್ಗಂಟಾಗಿ ಪರಿಣಮಿಸಿದ್ದು ಈ ನಡುವೆ ಈ ವಿಚಾರದಲ್ಲಿ ಹೆಚ್.ಡಿ ದೇವೇಗೌಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಹೆಚ್.ಡಿ ರೇವಣ್ಣ, ಹಾಸನ ಟಿಕೆಟ್ ಬಗ್ಗೆ ಹೆಚ್.ಡಿ ದೇವೇಗೌಡರು ಚರ್ಚಿಸುತ್ತಿದ್ದಾರೆ. ದೇವೇಗೌಡರಿಗೆ 60 ವರ್ಷ ರಾಜಕಾರಣದ ಅನುಭವವಿದೆ. ಅವರೇ ಹಾಸನ ಟಿಕೆಟ್ ಫೈನಲ್ ಮಾಡುತ್ತಾರೆ. ಎಲ್ಲವನ್ನೂ ನಾನು ಹೇಳಿದ್ದೇನೆ. ಅವರೇ ಟಿಕೆಟ್ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಾಮಾನ್ಯ ಕಾರ್ಯಕರ್ತ ಯಾರು ಅಂತಾ ದೇವೇಗೌಡರಿಗೆ ಗೊತ್ತಿದೆ. ದೇವೇಗೌಡರ ತೀರ್ಮಾನಕ್ಕೆ ಬದ್ಧ ಎಂದರು.

ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ರೇವಣ್ಣ,  ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಿಲ್ಲ.  ಹೊಳೆನರಸಿಪುರ  ಕ್ಷೇತ್ರ ಬಿಟ್ಟು ಬೇರೆ ಕಡೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Key words: HD Deve Gowda – decision – Hassan- ticket- Former minister -HD Revanna.