ಬೆಂಗಳೂರು,ಜೂನ್,6,2025 (www.justkannada.in): ಆರ್ ಸಿಬಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಸಂಭ್ರಮಾಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿರುವುದಕ್ಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸರ್ಕಾರದ ವೈಫಲ್ಯವೇ ಕಾರಣ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ.
ಇಂದು ಬಿಜೆಪಿ ಮತ್ತು ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಕಾಲ್ತುಳಿತದಲ್ಲಿ 11 ಜನರು ಸಾವು ಪ್ರಕರಣ ಸಂಬಂಧ ಪೊಲೀಸರ ಅಮಾನತು ಮಾಡಿರುವುದು ನಾಟಕವಷ್ಟೇ. ‘ಒಂದು ತಿಂಗಳು ಸಸ್ಪೆಂಡ್ ಅಂತಾ ನಾಟಕ ಮಾಡುತ್ತೇವೆ, ಬೇಸರ ಮಾಡಿಕೊಳ್ಳಬೇಡಿ’ ಎಂಬುದಾಗಿ ಮೊದಲೇ ಹೇಳಿರುತ್ತಾರೆ ಅಷ್ಟೇ ಎಂದು ಟೀಕಿಸಿದರು.
ಪೊಲೀಸ್ ಇಲಾಖೆ ಸಲಹೆ ಧಿಕ್ಕರಿಸಿದ್ದಕ್ಕೆ 11 ಜೀವಗಳ ಬಲಿಯಾಗಿದೆ. ಅದಕ್ಕೆ ಮೂಲ ಕಾರಣ ರಾಜ್ಯ ಸರ್ಕಾರ. ತಮ್ಮ ತಪ್ಪು ಮುಚ್ಚಿಕೊಳ್ಳಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ಹಲವರ ಅಮಾನತು ಮಾಡಿದ್ದಾರೆ. ಹೊಸ ವರ್ಷಾಚರಣೆ ವೇಳೆ ಕಮಿಷನರ್ ದಯಾನಂದ್ ಇದ್ದರು. ಲಕ್ಷಾಂತರ ಜನ ಸೇರಿದ್ದರೂ ಸಣ್ಣ ಅಹಿತಕರ ಘಟನೆಗೆ ಅವಕಾಶ ಕೊಟ್ಟಿರಲಿಲ್ಲ. ಸಸ್ಪೆಂಡ್ ಆದ ಡಿಸಿಪಿ ಒಬ್ಬರು ‘ಅಪ್ಪಯ್ಯ’ನ ಆತ್ಮೀಯರು ಎಂದು ಹೆಚ್.ಡಿಕೆ ಹೇಳಿದರು.
Key words: Union Minister, HD Kumaraswamy , suspension , police