ಹೆಚ್.ಡಿ ಕುಮಾರಸ್ವಾಮಿ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ….

ವಿಜಯಪುರ, ಜ,22,2020(www.justkannada.in): ‘ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದ್ದು ಒಂದು ಅಣಕು ಪ್ರದರ್ಶನದಂತಿತ್ತು’  ಎಂದು ಟೀಕಿಸಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಹೆಚ್ ಡಿಕೆ ಅವರು ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.

ವಿಜಯಪುರದಲ್ಲಿ ಇಂದು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಹೆಚ್.ಡಿ ಕುಮಾರಸ್ವಾಮಿ ಅವರ ಜೀವನವೇ ಅಣುಕು ಪ್ರದರ್ಶನದಂತಿದೆ. ಅವರು ಪಾಕಿಸ್ತಾನದ ಲೀಡರ್ ನಂತೆ ಮಾತನಾಡುತ್ತಿದ್ದಾರೆ. ಹೆಚ್.ಡಿಕೆಗೆ ಹುಚ್ಚು ಹಿಡಿದಿದ್ದು, ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಅವರಿಗೆ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡಬೇಕು ಎಂದು ವ್ಯಂಗ್ಯವಾಡಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ  ಆರೋಪಿ ಆದಿತ್ಯರಾವ್‌ನನ್ನು ಪೊಲೀಸರು ಬಂಧಿಸಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಪೊಲೀಸರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ರಾಜಕೀಯ ಮುಖಂಡರು ಮಾಡಬಾರದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

Key words: HD Kumaraswamy – become -OYC –Karnataka-BJP MLA- Basanagowda Patil yatnal