Friday, October 16, 2026

Dasara Wishes

Happy Dasara
Home Front Page ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಚಹಾಕೂಟ ಏರ್ಪಡಿಸಿ ಆಡಳಿತಾವಧಿಯಲ್ಲಿ ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಉಸ್ತುವಾರಿ ಸಿಎಂ...

ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಚಹಾಕೂಟ ಏರ್ಪಡಿಸಿ ಆಡಳಿತಾವಧಿಯಲ್ಲಿ ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಉಸ್ತುವಾರಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಜು,24,2019(www.justkannada.in): ಹಂಗಾಮಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಚಹಾಕೂಟ ಏರ್ಪಡಿಸಿ ಕಳೆದ 14 ತಿಂಗಳ ಆಡಳಿತಾವಧಿಯಲ್ಲಿ ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ತಮ್ಮ ಅಧಿಕಾರಾವಧಿಯಲ್ಲಿ ಎರಡು ಆಯಾವ್ಯಗಳ ಮೂಲಕ ರೂಪಿಸಿದ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಅಧಿಕಾರಿಗಳು ನಿಸ್ಪೃಹತೆಯಿಂದ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರಾಜಕೀಯ ವಿದ್ಯಮಾನಗಳು ಏನೇ ಇದ್ದರೂ  ನಿರ್ಲಿಪ್ತರಾಗಿ ಜನಹಿತಕ್ಕಾಗಿ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳ ಪರವಾಗಿ ಮಾತನಾಡಿದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಅವರು, ಕಳೆದ 14 ತಿಂಗಳ ಕಾರ್ಯ ನಿರ್ವಹಣೆಯ ಅವಧಿಯಲ್ಲಿ ಮುಖ್ಯಮಂತ್ರಿಯವರು ಅಧಿಕಾರಿಗಳನ್ನು ಸಹೋದರ ಭಾವದಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸಿದ್ದರು ಎಂದು ಸ್ಮರಿಸಿದರು.

ಪೊಲೀಸ್ ಮಹಾನಿರ್ದೇಶಕ ರಾದ ನೀಲಮಣಿ ಎನ್. ರಾಜು ಹಾಗೂ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Key words: HD Kumaraswamy – government – cooperation – senior officer- thankful