Thursday, September 17, 2026

BDA Apartments

Home Front Page ಅಂದುಕೊಂಡಂತೆ ಆಗದಿದ್ದರೆ ನಾಳೆ ಶಾಸಕಾಂಗ ಪಕ್ಷದ ಸಭೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?

ಅಂದುಕೊಂಡಂತೆ ಆಗದಿದ್ದರೆ ನಾಳೆ ಶಾಸಕಾಂಗ ಪಕ್ಷದ ಸಭೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?

ಬೆಂಗಳೂರು, ಜುಲೈ 07, 2019 (www.justkannada.in): ಸಂಕಷ್ಟದಲ್ಲಿರುವ ಮೈತ್ರಿ ಸರಕಾರದ ದೋಸ್ತಿ ನಾಯಕರು ಅಂದುಕೊಂಡಂತೆ ಆಗದಿದ್ದರೆ, ನಾಳೆಯೇ ಸರ್ಕಾರ ಪತನವಾಗಲಿದೆ. ನಾಳೆ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ.

ನಾಳೆ ಶಾಸಕಾಂಗ ಸಭೆ ನಡೆಸಿ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು, ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತನಾಡಿದ್ದಾರೆ.

ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಹುದ್ದೆಗೆ ಕುಮಾರಸ್ವಾಮಿ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಬಹುತೇಕ ನಾಳೆಯೇ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದು, ದೋಸ್ತಿ ಸರ್ಕಾರ ಪತನವಾಗಲಿದೆ ಎಂದು ಹೇಳಲಾಗಿದೆ.