Thursday, August 13, 2026

BDA Apartments

Home Front Page ಸಿದ್ಧೌಷಧ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆಗೆ  ಟಾಂಗ್ ನೀಡಿದ ಹೆಚ್.ಡಿ ಕುಮಾರಸ್ವಾಮಿ…

ಸಿದ್ಧೌಷಧ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆಗೆ  ಟಾಂಗ್ ನೀಡಿದ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಜು,22,2020(www.justkannada.in): ಸಮ್ಮಿಶ್ರ ಸರ್ಕಾರ ಪತನವಾಗಲು ಸಿದ್ಧೌಷಧ ಕಾರಣ ಎಂದಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಅದೆಲ್ಲಾ ಮುಗಿದು ಹೋದ ಕಥೆ ಎಂದಿದ್ದರು.

ಈ ಕುರಿತು ಇಂದು ಟ್ವೀಟ್ ಮಾಡಿ ಸಿದ್ದರಾಮಯ್ಯಗೆ ಟಾಂಗ್ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್   ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ರಾಜ್ಯದಲ್ಲಿ 8 ಇಲ್ಲವೆ 10  ಸ್ಥಾನ ಗೆಲ್ಲಬಹುದಿತ್ತು ಎಂದು ಸಿದ್ದರಾಮಯ್ಯ ಅವರು ಇತ್ತೀಚಿಗೆ ‘ಮೆಲುಕು’ ಹಾಕಿದ್ದರಿಂದಲೇ ನಾನು ಸಿದ್ಧೌಷಧದ ಬಗ್ಗೆ ನೆನಪಿಸಿಕೊಳ್ಳಬೇಕಾಯಿತು.

ಅವರ ಕನಸು-ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ  ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು. ನಮ್ಮ ಅವರ ದೋಸ್ತಿ  ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರೇ ಪದೇಪದೇ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ನಾನು ಮೌನ ಮುರಿಯಬೇಕಾಯಿತು.

ಕಾಂಗ್ರೆಸ್ ನಾಯಕರು ಈಗ ಮರಣೋತ್ತರ ಪರೀಕ್ಷೆ ಬಗ್ಗೆ  ರಾಗ ಎಳೆಯುತ್ತಿದ್ದಾರೆ. ಆದರೆ ವರದಿಯಲ್ಲಿ ಏನಿದೆ ಎಂಬ ಸತ್ಯಾಂಶವನ್ನು ನಾನು ಹೇಳಿದರೆ ಆ ಭಾಷೆ ನನಗೆ ಅರ್ಥವಾಗಲಿಲ್ಲ ಎಂದು ಜಾರಿಕೊಳ್ಳುವುದು ತರವಲ್ಲ ಎಂದು ಹೆಚ್.ಡಿಕೆ ಟ್ವೀಟ್ ಮಾಡಿದ್ದಾರೆ.

Key words:  hd kumaraswamy- siddaramauah-twitter