Tuesday, August 4, 2026

BDA Apartments

Home Front Page ಬಿಜೆಪಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಿ ಪ್ರತೀಕಾರ ತೀರಿಸಿಕೊಳ್ಳುವಷ್ಟು ಕೆಳಮಟ್ಟಕ್ಕೆ ಇಳಿಯಲ್ಲ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬಿಜೆಪಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಿ ಪ್ರತೀಕಾರ ತೀರಿಸಿಕೊಳ್ಳುವಷ್ಟು ಕೆಳಮಟ್ಟಕ್ಕೆ ಇಳಿಯಲ್ಲ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಚಿಕ್ಕೋಡಿ, ಅಕ್ಟೋಬರ್ 27, 2019 (www.justkannada.in): ಬಿಜೆಪಿ ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದೆ. ಅಂದ ಮಾತ್ರಕ್ಕೆ ನಾನು ಬಿಜೆಪಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರವನ್ನು ಬೀಳಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಾಗೆಂದು ನಾವು ಅದನ್ನೇ ಮಾಡಿ ದ್ವೇಷ ಸಾಧಿಸಲ್ಲ. ನಾವು ಕೂಡ ಅವರಂತೆಯೇ ಮಾಡಿದರೆ ಬೀದಿಯಲ್ಲಿರುವ ಜನರನ್ನು ನೋಡುವರಾರು? ಅವರ ಪರಿಸ್ಥಿತಿ ಏನಾಗಬಾದು? ಎಂದರು.

ಪ್ರವಾಹದಿಂದಾಗಿ ರಾಜ್ಯ ಈಗ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಹೀಗಾಗಿ ಮೊದಲು ನೆರೆಯಿಂದಾಗಿ ಬೆಳೆ ನಷ್ಟ ಆಗಿರುವ ರೈತರಿಗೆ ಆರ್ಥಿಕ ನೆರವು ಒದಗಿಸಲು ಸರ್ಕಾರದ ಗಮನ ಸೆಳೆಯುತ್ತೇನೆ, ಸಲಹೆ ಕೊಡುತ್ತೇನೆ. ಒಂದು ವೇಳೆ ಕೆಲಸ ಆಗಲಿಲ್ಲ ಎಂದರೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.