Friday, August 14, 2026

BDA Apartments

Home Crime ಬಂಧನ ಭೀತಿ: ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಹೆಚ್.ಡಿ ರೇವಣ್ಣ

ಬಂಧನ ಭೀತಿ: ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಹೆಚ್.ಡಿ ರೇವಣ್ಣ

ಬೆಂಗಳೂರು,ಮೇ,3,2024 (www.justkannada.in):  ಲೈಂಗಿಕ ದೌರ್ಜನ್ಯ ಪ್ರಕರಣ ನಂತರ ಕಿಡ್ನಾಪ್ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮತ್ತೆ ಶಾಸಕ ಹೆಚ್.ಡಿ ರೇವಣ್ಣಗೆ ಬಂಧನ ಭೀತಿ ಶುರುವಾಗದ್ದು ಇದೀಗ ಮತ್ತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ರೇವಣ್ಣ  ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿ ಕೋರಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ನಿನ್ನೆಯಷ್ಟೇ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಇಂದಿಗೆ ಕೋರ್ಟ್ ಮುಂದೂಡಿಕೆ ಮಾಡಿತ್ತು. ಇಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು.   ಎಚ್ ಡಿ ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪ ಸೇರಿಸಿಲ್ಲ. ಅತ್ಯಾಚಾರ ಆರೋಪವಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನು ಅಗತ್ಯವಿಲ್ಲ. ಪ್ರಕರಣದಲ್ಲಿ ಜಾಮೀನು ನೀಡಬಹುದಾದ  ಆರೋಪಗಳು ಮಾತ್ರ ಇವೆ  ಎಂದು ಎಸ್ ಐಟಿ ಹೇಳಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಹೆಚ್ ಡಿ ರೇವಣ್ಣ ಅರ್ಜಿ ಹಿಂಪಡೆದಿದ್ದರು.

 ಸಂತ್ರಸ್ತ ಮಹಿಳೆಯನ್ನ ಅಪಹರಣ ಮಾಡಿದ ಆರೋಪದ ಮೇಲೆ ಮೈಸೂರು ಜಿಲ್ಲೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಹೆಚ್.ಡಿ ರೇವಣ್ಣ ವಿರುದ್ದ ಮತ್ತೊಂದು ದೂರು ದಾಖಲಾಗಿದೆ. ಸಂತ್ರಸ್ತ ಮಹಿಳೆಯ ಪುತ್ರ ಕಿಡ್ನಾಪ್ ಕೇಸ್ ದಾಖಲಿಸಿದ್ದಾರೆ.

ಕಿಡ್ನಾಪ್ ಪ್ರಕರಣ ಜಾಮೀನು ರಹಿತ ಪ್ರಕರಣವಾದ್ದರಿಂದ ಇದೀಗ ಹೆಚ್ ಡಿ ರೇವಣ್ಣ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿರೋದಾಗಿ ತಿಳಿದು ಬಂದಿದೆ.

Key words: HD Revanna, again, applied , anticipatory bail