Friday, July 31, 2026

BDA Apartments

Home Front Page ಶಾಸಕ ಹೆಚ್ ಡಿ ರೇವಣ್ಣ ವಿರುದ್ದ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸ್: ವಿಚಾರಣೆ ಫೆ.7ಕ್ಕೆ ಮುಂದೂಡಿಕೆ

ಶಾಸಕ ಹೆಚ್ ಡಿ ರೇವಣ್ಣ ವಿರುದ್ದ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸ್: ವಿಚಾರಣೆ ಫೆ.7ಕ್ಕೆ ಮುಂದೂಡಿಕೆ

 ಬೆಂಗಳೂರು,ಜನವರಿ,30,2025 (www.justkannada.in): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ  ಕೆ ಆರ್ ನಗರದ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್ ಫೆಬ್ರವರಿ 7ಕ್ಕೆ ಮುಂದೂಡಿಕೆ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ವಿಸ್ತರಣೆ ಮಾಡಿ ವಿಚಾರಣೆಯನ್ನು ಫೆಬ್ರವರಿ 7 ಕ್ಕೆ ಮುಂದೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಎಚ್ ಡಿ ರೇವಣ್ಣ ಅವರಿಗೆ ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಪ್ರಕರಣದ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಆರೋಪದ ಮೇಲೆ ಹೆಚ್.ಡಿ ರೇವಣ್ಣ ವಿರುದ್ದ ಪ್ರಕರಣ ದಾಖಲಾಗಿದೆ. ಇನ್ನು ಕಿಡ್ನಾಪ್​ ಕೇಸ್​ನಲ್ಲಿ ಹೆಚ್​ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.

Key words: Woman kidnap case, HD Revanna, Hearing, adjourned