ಸಿಎಂ ಆಗಲು ಹೆಚ್.ಡಿ ರೇವಣ್ಣ ಕೂಡ ಅರ್ಹರು- ಸಿಎಂ ಹೆಚ್.ಡಿಕೆ  ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟ ಸಿದ್ದರಾಮಯ್ಯ…

0
311

ಬೆಂಗಳೂರು,ಮೇ,16,2019(www.justkannada.in):  ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು ಎಂದು ಹೇಳಿಕೆ ನೀಡಿದ್ದ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ,  ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸ್ಥಾನ ಮಾತ್ರವಲ್ಲ ಅದಕ್ಕಿಂತಲೂ ಉನ್ನತ ಸ್ಥಾನ ಅಲಂಕರಿಸುವ ಅರ್ಹತೆ ಇದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ  ಸಿಎಂ ಸ್ಥಾನದ ಅರ್ಹತೆಗೆ ಬಹಳ ಜನರಿದ್ದಾರೆ. ಅವರಲ್ಲಿ ಹೆಚ್.ಡಿ ರೇವಣ್ಣ ಕೂಡ ಒಬ್ಬರು ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಚಾಟಿ ಬೀಸಿದ್ದಾರೆ.

ಈ ಮೂಲಕ ಹೆಚ್.ಡಿ ರೇವಣ್ಣ ಅವರೂ ಕೂಡ ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದಾರೆ. ಚಿಂಚೋಳಿ ಉಪಚುನಾವಣೆ ಹಿನ್ನೆಲೆ ಪ್ರಚಾರ ಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತನಾಡುತ್ತಾ,  ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಲ್ಲಿ ಯಾವಾಗಲೋ ಸಿಎಂ ಆಗಬೇಕಿತ್ತು ಎಂದು ಹೇಳಿಕೆ ನೀಡಿದ್ದರು.

Key words: HD reveanna –also- eligible- CM-Siddaramaiah-tong-cm hdkumaraswamy