ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಸಂತಾಪ

ಬೆಂಗಳೂರು,ಏಪ್ರಿಲ್,16,2024 (www.justkannada.in): ಕನ್ನಡದ ಹಿರಿಯ ನಟ ನಿರ್ದೇಶಕ ದ್ವಾರಕೀಶ್ ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಇಂದು ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್  ನಿಧನರಾಗಿದ್ದು ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ ಎಂದು ಸ್ಮರಿಸಿದ್ದಾರೆ.

ವರನಟ ಡಾ. ರಾಜ್‌ಕುಮಾರ್‌, ಡಾ. ವಿಷ್ಣುವರ್ಧನ್‌,  ಅಂಬರೀಶ್‌ ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

Key words: HDK, condoles, death, actor, Dwarkeesh